Home Bibles 1 ಪೇತ್ರ 4:9 · ಕನ್ನಡ ಬೈಬಲ್
1 ಪೇತ್ರ 4:9 · ಕನ್ನಡ ಬೈಬಲ್

ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.

Cross references

ಆದಿಕಾಂಡ 24:19

ಅವನಿಗೆ ಕುಡಿಯು ವದಕ್ಕೆ ಕೊಟ್ಟನಂತರ ಆಕೆಯು--ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ತರುತ್ತೇನೆ ಎಂದು ಹೇಳಿದಳು.

ರೋಮಾಪುರದವರಿಗೆ 12:13

ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.

ರೋಮಾಪುರದವರಿಗೆ 16:23

ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

2 ಕೊರಿಂಥದವರಿಗೆ 9:7

ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.

ಫಿಲಿಪ್ಪಿಯವರಿಗೆ 2:14

ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.

1 ತಿಮೋಥೆಯ 3:2

ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.

ತೀತ 1:8

ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು

ಫಿಲೇಮೋನ 1:14

ಆದರೆ ನಿನ್ನ ಉಪಕಾರವು ಬಲಾತ್ಕಾರದಿಂದಾಗದೆ ಮನಃ ಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವದಕ್ಕೂ ನನಗೆ ಇಷ್ಟವಿರಲಿಲ್ಲ.

ಹೆಬ್ರಿಯರಿಗೆ 13:2

ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.

ಹೆಬ್ರಿಯರಿಗೆ 13:16

ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.

ಯಾಕೋಬ 5:9

ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.

Interlinear

Choose Theme