Home Bibles 1 ಪೇತ್ರ 5:14 · ಕನ್ನಡ ಬೈಬಲ್
1 ಪೇತ್ರ 5:14 · ಕನ್ನಡ ಬೈಬಲ್

ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ. ಆಮೆನ್‌.

Cross references

ಯೋಹಾನ 14:27

ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.

ಯೋಹಾನ 16:33

ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.

ಯೋಹಾನ 20:19

ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.

ಯೋಹಾನ 20:26

ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.

ರೋಮಾಪುರದವರಿಗೆ 1:7

ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.

ರೋಮಾಪುರದವರಿಗೆ 8:1

ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.

ರೋಮಾಪುರದವರಿಗೆ 16:16

ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ.

1 ಕೊರಿಂಥದವರಿಗೆ 1:30

ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.

1 ಕೊರಿಂಥದವರಿಗೆ 16:20

ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

2 ಕೊರಿಂಥದವರಿಗೆ 5:17

ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.

2 ಕೊರಿಂಥದವರಿಗೆ 13:12

ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

ಎಫೆಸದವರಿಗೆ 6:23

ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್‌.

1 ತೆಸಲೋನಿಕದವರಿಗೆ 5:26

ಪವಿತ್ರವಾದ ಮುದ್ದಿಟ್ಟು ಸಹೋದರ ರೆಲ್ಲರನ್ನೂ ವಂದಿಸಿರಿ.

1 ಪೇತ್ರ 1:2

ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್‌ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

Interlinear

Choose Theme