ನಿನ್ನ ದಾಸಿಯನ್ನು ಬೆಲಿಯಾಳನ ಮಗಳೆಂದು ನೆನಸಬೇಡ; ಯಾಕಂದರೆ ನನ್ನ ಹೆಚ್ಚಾದ ಚಿಂತೆಯಿಂದಲೂ ದುಃಖದಿಂದಲೂ ಈ ವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು ಅಂದಳು.
Cross references
ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,
ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.
ನನ್ನ ವ್ಯಥೆಯನ್ನೆಲ್ಲಾ ತೂಗಿದರೆ, ನನ್ನ ಶ್ರಮೆಯನ್ನು ತ್ರಾಸಿನಲ್ಲಿಟ್ಟರೆ ಲೇಸು.
ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು.
ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.