Cross references
ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.
ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?
ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.
ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು.
ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ.
ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.
ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.