Home Bibles 1 ಸಮುವೇಲ 13:11 · ಕನ್ನಡ ಬೈಬಲ್
1 ಸಮುವೇಲ 13:11 · ಕನ್ನಡ ಬೈಬಲ್

ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ

Cross references

ಆದಿಕಾಂಡ 3:13

ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.

ಆದಿಕಾಂಡ 4:10

ಆತನು--ನೀನು ಮಾಡಿದ್ದೇನು? ನಿನ್ನ ಸಹೋದರನ ರಕ್ತದ ಸ್ವರವು ಭೂಮಿಯಿಂದ ನನ್ನನ್ನು ಕೂಗುತ್ತದೆ.

ಯೆಹೋಶುವ 7:19

ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.

1 ಸಮುವೇಲ 13:2

ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್‌ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.

1 ಸಮುವೇಲ 13:5

ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.

1 ಸಮುವೇಲ 13:16

ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್‌ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.

1 ಸಮುವೇಲ 13:23

ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.

1 ಸಮುವೇಲ 14:5

ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ ಮತ್ತೊಂದು ದಕ್ಷಿಣಕ್ಕೆ ಗಿಬೆಗೆ ಎದುರಾಗಿಯೂ ಇತ್ತು.

2 ಸಮುವೇಲ 3:24

ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ?

2 ಅರಸುಗಳು 5:25

ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.

ಯೆಶಾಯ 10:28

ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.

Interlinear

Choose Theme