Home Bibles 1 ಸಮುವೇಲ 13:15 · ಕನ್ನಡ ಬೈಬಲ್
1 ಸಮುವೇಲ 13:15 · ಕನ್ನಡ ಬೈಬಲ್

ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್‌ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು.

Cross references

1 ಸಮುವೇಲ 13:2

ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್‌ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.

1 ಸಮುವೇಲ 13:6

ಆಗ ಇಸ್ರಾಯೇಲ್‌ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.

1 ಸಮುವೇಲ 14:2

ಸೌಲನು ಗಿಬೆಯ ಕಟ್ಟಕಡೇ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬರ ಗಿಡದ ಕೆಳಗಿದ್ದನು. ಅವನ ಸಂಗಡ ಸುಮಾರು ಆರು ನೂರು ಜನರಿದ್ದರು.

Interlinear

Choose Theme