ಮತ್ತೊಂದು ಗುಂಪು ಬೇತ್‌ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.
Cross references
ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್‌ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
ತರುವಾಯ ಅವರು ಬೇತ್‌ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್‌ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು.
ಅವರ ಕುಟುಂಬಗಳ ಪ್ರಕಾರ ಎಫ್ರಾಯಾಮ್ ಮಕ್ಕಳ ಮೇರೆಯು ಹೀಗಿತ್ತು: ಕೆಳಗಡೆ ಮೂಡಣದ ಮೇರೆಯು ಅಟಾರೋತದ್ದಾನಿಂದ ಪ್ರಾರಂಭಿಸಿ ಮೇಲ್ಗಡೆ ಪಶ್ಚಿಮದ ಮೇರೆ ಬೇತ್‌ಹೋರೋನಿನ ವರೆಗೂ ಇತ್ತು.
ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್‌ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು.
ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್‌ಹೋ ರೋನನ್ನೂ ಅದರ ಉಪನಗರಗಳನ್ನೂ,
ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.
ಹಾದೀದು ಚೆಬೋ ಯಾಮ್ ನೆಬಲ್ಲಾಟು
ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.