Home Bibles 1 ಸಮುವೇಲ 14:1 · ಕನ್ನಡ ಬೈಬಲ್
1 ಸಮುವೇಲ 14:1 · ಕನ್ನಡ ಬೈಬಲ್

ಆ ಕಾಲದಲ್ಲಿ ಏನಾಯಿತಂದರೆ, ಸೌಲನಮಗನಾದ ಯೋನಾತಾನನು ತನ್ನ ಆಯು ಧಗಳನ್ನು ಹಿಡಿಯುವವನಾದ ಯೌವನಸ್ಥನಿಗೆ--ನಾವು ನಮಗೆದುರಾಗಿ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ ಅಂದನು; ಆದರೆ ಅವನು ತನ್ನ ತಂದೆಗೆ ತಿಳಿಸಲಿಲ್ಲ.

Cross references

ನ್ಯಾಯಾಧಿಪತಿಗಳು 6:27

ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು ಕರ್ತನು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಹಗಲಲ್ಲಿ ಮಾಡದ ಹಾಗೆ ಅವನು ತನ್ನ ತಂದೆಯ ಮನೆಯವರಿಗೂ ಆ ಊರಿನ ಮನುಷ್ಯರಿಗೂ ಭಯಪಟ್ಟಿದ್ದರಿಂದ ರಾತ್ರಿಯಲ್ಲಿ ಮಾಡಿ ದನು.

ನ್ಯಾಯಾಧಿಪತಿಗಳು 14:6

ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.

ನ್ಯಾಯಾಧಿಪತಿಗಳು 14:9

ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.

1 ಸಮುವೇಲ 13:2

ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್‌ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.

1 ಸಮುವೇಲ 13:22

ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು.ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.

1 ಸಮುವೇಲ 14:39

ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.

1 ಸಮುವೇಲ 18:1

ದಾವೀದನು ಸೌಲನ ಸಂಗಡ ಮಾತನಾಡಿ ತೀರಿಸಿದಾಗ ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.

1 ಸಮುವೇಲ 25:19

ತನ್ನ ಸೇವಕರಿಗೆ--ನನಗೆ ಮುಂದಾಗಿ ಹೋಗಿರಿ; ಇಗೋ, ನಾನು ನಿಮ್ಮ ಹಿಂದೆ ಬರುವೆನೆಂದು ಹೇಳಿದಳು; ಆದರೆ ತನ್ನ ಗಂಡನಾದ ನಾಬಾಲನಿಗೆ ತಿಳಿಸಲಿಲ್ಲ.

2 ಸಮುವೇಲ 1:4

ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು.

2 ಸಮುವೇಲ 1:25

ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ! ಯೋನಾತಾನನೇ, ನೀನು ನಿನ್ನ ಉನ್ನತಸ್ಥಳಗಳಲ್ಲಿ ಕೊಲ್ಲಲ್ಪಟ್ಟಿ.

ಮೀಕ 7:5

ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.

Interlinear

Choose Theme