ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು.
Cross references
ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು.
ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.
ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
ನಿನ್ನಿಂದ ನಾನು ದಂಡಿನ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದೆನು.
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.