Home Bibles 1 ಸಮುವೇಲ 14:24 · ಕನ್ನಡ ಬೈಬಲ್
1 ಸಮುವೇಲ 14:24 · ಕನ್ನಡ ಬೈಬಲ್

ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.

Cross references

ಲೇವ್ಯಕಾಂಡ 5:4

ಇಲ್ಲವೆ ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ಮಾಡುವದನ್ನು ತನ್ನ ತುಟಿಗಳಿಂದ ಉಚ್ಚರಿಸಿ ಪ್ರಮಾಣದೊಡನೆ ಉಚ್ಚರಿಸಿದ್ದು ಯಾವದೇ ಆಗಿರಲಿ ಅದು ಅವನಿಗೆ ತಿಳಿಯದೆ ಇದ್ದು ತರುವಾಯ ತಿಳಿದಾಗ ಇವುಗಳಲ್ಲೊಂದರಲ್ಲಿ ಅವನು ಅಪರಾಧಿಯಾಗಿರುವನು.

ಲೇವ್ಯಕಾಂಡ 27:29

ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.

ಅಂಕೆಗಳ ಪುಸ್ತಕ 21:2

ಆಗ ಇಸ್ರಾಯೇಲು ಕರ್ತನಿಗೆ ಪ್ರಮಾಣಮಾಡಿ ಹೇಳಿದ್ದೇನಂದರೆ--ನೀನು ಈ ಜನರನ್ನು ನನ್ನ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ ನಾನು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.

ದ್ವಿತೀಯೋಪದೇಶಕಾಂಡ 27:15

ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್‌ ಎಂದು ಹೇಳಲಿ.

ಯೆಹೋಶುವ 6:17

ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.

ಯೆಹೋಶುವ 6:26

ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.

ನ್ಯಾಯಾಧಿಪತಿಗಳು 1:28

ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು.

ನ್ಯಾಯಾಧಿಪತಿಗಳು 5:2

ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.

ನ್ಯಾಯಾಧಿಪತಿಗಳು 11:30

ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ

ನ್ಯಾಯಾಧಿಪತಿಗಳು 21:1

ಆದರೆ ಇಸ್ರಾಯೇಲ್ಯರು ತಮ್ಮಲ್ಲಿ ಯಾವನೂ ತನ್ನ ಮಗಳನ್ನು ಬೆನ್ಯಾವಿಾನ್ಯ ರಿಗೆ ಮದುವೆಮಾಡಿಕೊಡುವದಿಲ್ಲ ಎಂದು ಮಿಚ್ಪೆಯಲ್ಲಿ ಆಣೆಇಟ್ಟರು.

ನ್ಯಾಯಾಧಿಪತಿಗಳು 21:5

ಆದರೆ ಇಸ್ರಾಯೇಲ್‌ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.

1 ಸಮುವೇಲ 14:27

ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು.

1 ಸಮುವೇಲ 18:25

ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.

ಕೀರ್ತನೆಗಳು 18:47

ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.

ಸಾಮೇತಿಗಳು 11:9

ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ; ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು.

ರೋಮಾಪುರದವರಿಗೆ 10:2

ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.

1 ಕೊರಿಂಥದವರಿಗೆ 16:22

ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).

Interlinear

Choose Theme