Home Bibles 1 ಸಮುವೇಲ 14:49 · ಕನ್ನಡ ಬೈಬಲ್
1 ಸಮುವೇಲ 14:49 · ಕನ್ನಡ ಬೈಬಲ್

ಸೌಲನ ಕುಮಾರರ ಹೆಸರುಗಳು ಯೋನಾ ತಾನ್‌ ಇಷ್ವಿ ಮಲ್ಕೀಷೂವ ಎಂಬಿವುಗಳು; ಹಿರಿಯ ವಳಾದ ಮೇರಾಬ್‌, ಚಿಕ್ಕವಳಾದ ವಿಾಕಲ್‌ ಎಂಬ ಇಬ್ಬರು ಕುಮಾರ್ತೆಯರು ಇದ್ದರು.

Cross references

1 ಸಮುವೇಲ 18:7

ಆ ಸ್ತ್ರೀಯರು ಹಾಡುತ್ತಾ ಒಬ್ಬರಿಗೊಬ್ಬರು--ಸೌಲನು ಸಾವಿರಗಳನ್ನೂ ದಾವೀ ದನು ಹತ್ತು ಸಾವಿರಗಳನ್ನೂ ಕೊಂದನೆಂದು ಪ್ರತ್ಯುತ್ತರ ಕೊಟ್ಟರು.

1 ಸಮುವೇಲ 18:17

ಆಗ ಸೌಲನು--ನನ್ನ ಕೈ ಅವನ ಮೇಲೆ ಇರಬಾರದು; ಆದರೆ ಫಿಲಿಷ್ಟಿಯರ ಕೈ ಅವನ ಮೇಲೆ ಇರಲಿ ಅಂದುಕೊಂಡು ದಾವೀದನಿಗೆ--ಇಗೋ, ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು; ನೀನು ನನಗೋಸ್ಕರ ಪರಾಕ್ರಮಶಾಲಿ ಯಾಗಿದ್ದು ಕರ್ತನ ಯುದ್ಧಗಳನ್ನು ನಡಿಸು ಅಂದನು.

1 ಸಮುವೇಲ 18:20

ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು.

1 ಸಮುವೇಲ 25:44

ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್‌ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.

1 ಸಮುವೇಲ 31:2

ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು.

2 ಸಮುವೇಲ 3:13

ಅದಕ್ಕವನು--ಒಳ್ಳೇದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು; ಆದರೆ ಒಂದನ್ನು ನಾನು ನಿನ್ನನ್ನು ಕೇಳುತ್ತೇನೆ; ಏನಂದರೆ, ನೀನು ನನ್ನ ಮುಖವನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ವಿಾಕಲಳನ್ನು ನೀನು ಕರಕೊಂಡು ಬಾರದೆ ಹೋದರೆ ನೀನು ನನ್ನ ಮುಖವನ್ನು ನೋಡಬಾರದು ಅಂದನು.

2 ಸಮುವೇಲ 6:20

ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.

1 ದಿನವೃತ್ತಾಂತ 8:33

ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.

1 ದಿನವೃತ್ತಾಂತ 9:39

ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.

Interlinear

Choose Theme