ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.
Cross references
ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ.
ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ?
ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು.