ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.
Cross references
ಆಗ ಯೆಹೋಶುವನು--ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸುಗಳನ್ನು ಗವಿಯೊಳಗಿಂದ ನನ್ನ ಬಳಿಗೆ ಹೊರಗೆ ತನ್ನಿರಿ ಅಂದನು.
ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಮೂಡಣದಲ್ಲಿದ್ದ ಡೇರೆಗಳಲ್ಲಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಆ ದಂಡನ್ನು ಹೊಡೆದು ಬಿಟ್ಟನು. ಯಾಕಂದರೆ ಆ ದಂಡು ಭದ್ರವಾಗಿತ್ತು.
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು