ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು.
Cross references
ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು.
ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.
ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.
ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.