ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾ ಯೇಲ್ ಸೈನ್ಯದವರಿಗೆ ಕೂಗಿ ಹೇಳಿದ್ದೇನಂದರೆ--ಯಾಕೆ ನೀವು ವ್ಯೂಹ ಕಟ್ಟಲು ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರ ಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆದು ಕೊಳ್ಳಿರಿ; ಅವನು ನನ್ನ ಮುಂದೆ ಬರಲಿ.
Cross references
ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ.
ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವದಿಲ್ಲ ಅಂದನು.
ಅದಕ್ಕೆ ಯೋವಾಬನು--ಕರ್ತನು ತನ್ನ ಜನರನ್ನು ಈಗ ಇರುವದಕ್ಕಿಂತ ನೂರರಷ್ಟಾಗಿ ಮಾಡಲಿ; ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರು ನನ್ನ ಒಡೆಯನ ಸೇವಕರಲ್ಲವೋ? ನನ್ನ ಒಡೆಯನು ಈ ಕಾರ್ಯವನ್ನು ವಿಚಾರಿಸುವದು ಯಾಕೆ? ಅವನು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವದು ಯಾಕೆ ಅಂದನು.