ಆದರೆ ಸೌಲನ ಮಗಳಾದ ಮೇರಬಳು ದಾವೀದನಿಗೆ ಕೊಡಲ್ಪಡುವದಕ್ಕಿರುವಾಗ ಅವಳು ಮೆಹೋಲದವನಾದ ಅದ್ರೀಯೇಲನಿಗೆ ಹೆಂಡತಿಯಾಗಿ ಕೊಡಲ್ಪಟ್ಟಳು.
Cross references
ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು
ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್‌ಷೆ ಯಾನ್; ಬೇತ್‌ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.