ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.
Cross references
ಮಾರನೆ ದಿವಸದಲ್ಲಿ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಮನೆಯ ಮಧ್ಯ ದಲ್ಲಿ ಪ್ರವಾದಿಸುತ್ತಿದ್ದನು (ಕಾಲಜ್ಞಾನ). ಆಗ ದಾವೀ ದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.
ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.
ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.
ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು.
ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.
ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ.
ಆದದರಿಂದ ತಿರಿಗಿ ಅವರು ಆತನನ್ನು ಹಿಡಿಯುವದಕ್ಕೆ ಹುಡುಕಿದರು; ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.