ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?
Cross references
ಕರ್ತನು ಮೋಶೆಯ ಮೇಲೆ ಕೋಪಗೊಂಡು--ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡ ಬಲ್ಲನೆಂದು ನಾನು ಬಲ್ಲೆನು. ಇಗೋ, ಅವನು ನಿನ್ನನ್ನು ಎದುರು ಗೊಳ್ಳುವದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿ ತನ್ನ ಹೃದಯದಲ್ಲಿ ಆನಂದಿಸುವನು.
ಇದಲ್ಲದೆ ಕರ್ತನು ಆರೋನನಿಗೆ--ಮೋಶೆ ಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೋಗು ಅಂದನು. ಅವನು ಹೋಗಿ ದೇವರ ಬೆಟ್ಟದಲ್ಲಿ ಅವನನ್ನು ಎದುರುಗೊಂಡು ಮುದ್ದಿಟ್ಟನು.
ಕರ್ತನು ಐಗುಪ್ತದಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನಂದರೆ--
ಕರ್ತನು ಮೋಶೆ ಆರೋನರಿಗೆ--ಪಸ್ಕದ ಶಾಸನವು ಇದೇ: ಅನ್ಯರಲ್ಲಿ ಯಾರೂ ಅದನ್ನು ತಿನ್ನ ಬಾರದು.
ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್ ಮಕ್ಕಳ ಬಳಿಗೆ ಕಳುಹಿಸಿದನು.
ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
ಹಾಗೆಯೇ ಅವನು ಎಫ್ರಾಯಾಮ್ ಬೆಟ್ಟವನ್ನೂ ಶಾಲೀಷಾ ದೇಶವನ್ನೂ ದಾಟಿಹೋದನು; ಆದರೆ ಅವು ಸಿಕ್ಕಲಿಲ್ಲ. ಅವನು ಶಾಲೀಮ್ ದೇಶವನ್ನು ಹಾದುಹೋದನು; ಅಲ್ಲಿಯೂ ಅವುಗಳು ಇಲ್ಲದೆ ಹೋದವು. ಅವನು ಬೆನ್ಯಾವಿಾನನ ದೇಶವನ್ನು ದಾಟಿ ದರೂ ಅವುಗಳನ್ನು ಕಾಣದೆ ಹೋದನು.
ಅದಕ್ಕವನು--ಇಗೋ, ಈ ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು.
ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.
ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.