Home Bibles 1 ಸಮುವೇಲ 2:29 · ಕನ್ನಡ ಬೈಬಲ್
1 ಸಮುವೇಲ 2:29 · ಕನ್ನಡ ಬೈಬಲ್

ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು?

Cross references

ಲೇವ್ಯಕಾಂಡ 19:15

ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.

ದ್ವಿತೀಯೋಪದೇಶಕಾಂಡ 12:5

ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.

ದ್ವಿತೀಯೋಪದೇಶಕಾಂಡ 32:15

ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.

ದ್ವಿತೀಯೋಪದೇಶಕಾಂಡ 33:9

ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.

ಯೆಹೋಶುವ 18:1

ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.

1 ಸಮುವೇಲ 2:13

ಆ ಯಾಜಕರು ಜನರನ್ನು ನಡಿಸಿದ ವಿಧ ಏನಂದರೆ, ಯಾವನಾದರೂ ಬಲಿ ಅರ್ಪಿಸಿದರೆ ಅರ್ಪಿಸಿದ ಆ ಬಲಿಯ ಮಾಂಸವನ್ನು ಬೇಯಿಸುವಾಗ ಯಾಜಕನ ಸೇವಕನು ಮೂರು ಮುಳ್ಳು ಗಳುಳ್ಳ ಕೊಂಡಿಯನ್ನು ತಕ್ಕೊಂಡು

2 ಅರಸುಗಳು 12:6

ಆದರೆ ಅರಸನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದ ವರೆಗೂ ಯಾಜಕರು ಮನೆಯ ಒಡಕುಗ ಳನ್ನು ದುರಸ್ತು ಮಾಡದೆ ಇದ್ದರು.

ಯೆಶಾಯ 56:11

ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.

ಯೆಹೆಜ್ಕೇಲ 13:19

ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?

ಯೆಹೆಜ್ಕೇಲ 34:2

ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?

ಹೊಶೇಯ 4:8

ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.

ಮೀಕ 3:5

ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.

ಮಲಾಕಿ 1:12

ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ.

ಮತ್ತಾಯ 10:37

ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.

ಮತ್ತಾಯ 22:16

ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು

ಲೂಕ 14:26

ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.

ರೋಮಾಪುರದವರಿಗೆ 16:18

ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

2 ಕೊರಿಂಥದವರಿಗೆ 5:16

ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,

ಯಾಕೋಬ 3:17

ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.

Interlinear

Choose Theme