ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
Cross references
ಆಗ ಫರೋಹನು ಯೋಸೇಫನನ್ನು ಕರೇ ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾ ಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿ ಕೊಂಡವನಾಗಿ ತನ್ನ ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.
ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;
ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ.
ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?
ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು?
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
ಮೂರ್ಖತನದಿಂದ ವರ್ತಿಸಬೇಡಿರಿ ಎಂದು ಮೂರ್ಖರಿಗೆ ಹೇಳುತ್ತೇನೆ. ಕೊಂಬು ಎತ್ತಬೇಡಿರಿ ಎಂದು ದುಷ್ಟರಿಗೆ ಹೇಳಿದೆನು.
ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು.
ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ.
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ.
ಆಗ ಅರಸನು ದಾನಿಯೇಲನನ್ನು ಒಬ್ಬ ಮಹಾ ವ್ಯಕ್ತಿಯನ್ನಾಗಿ ಮಾಡಿ ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟು ಸಮಸ್ತ ಬಾಬೆಲಿನ ಪ್ರಾಂತ್ಯಗಳಿಗೆ ಅಧಿಕಾರಿಯನ್ನಾ ಗಿಯೂ ಬಾಬೆಲಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿ ಪತಿಯನ್ನಾಗಿಯೂ ನೇಮಿಸಿದನು.ಆ ಮೇಲೆ ದಾನಿ ಯೇಲನು ಅರಸನನ್ನು ಬೇಡಿಕೊಂಡದ್ದರಿಂದ ಅರಸನು ಶದ್ರಕ್ ಮೇಷಕ್ ಮತ್ತು ಅಬೇದ್‌ನೆಗೋ ಎಂಬವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನಾದರೋ ಅರಸನ ಅರಮನೆಯಲ್ಲೇ ಇದ್ದನು.
ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.
ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
ಅಲ್ಲಿ ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪವಾಗಲಿ ಸೂರ್ಯನ ಬೆಳಕಾಗಲಿ ಬೇಕಾಗಿರುವ ದಿಲ್ಲ; ಯಾಕಂದರೆ ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು. ಅವರು ಯುಗಯುಗಾಂತರ ಗಳಲ್ಲಿಯೂ ಆಳುವರು.