Home 1 Samuel 21 · ಕನ್ನಡ ಬೈಬಲ್

1 Samuel

Chapter 21

ಕನ್ನಡ ಬೈಬಲ್
1ತರುವಾಯ ದಾವೀದನು ನೋಬ್‌ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.
2ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.
3ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ ನಿನಗೆ ದೊರಕಿದ ಯಾವದನ್ನಾದರೂ ನನಗೆ ಕೊಡು ಅಂದನು.
4ಯಾಜಕನು ದಾವೀದನಿಗೆ ಪ್ರತ್ಯುತ್ತರ ವಾಗಿ--ಪರಿಶುದ್ಧ ರೊಟ್ಟಿಯ ಹೊರತಾಗಿ ನನ್ನ ಕೈಯಲ್ಲಿ ಬಳಕೆಯಾದ ರೊಟ್ಟಿ ಒಂದಾದರೂ ಇಲ್ಲ; ಯೌವನ ಸ್ಥರು ಸ್ತ್ರೀಯರ ಬಳಿಗೆ ಸೇರದಿದ್ದರೆ ಅದು ಆಗಲಿ ಅಂದನು.
5ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಈ ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು.
6ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.
7ಆದರೆ ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗ ನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಕರ್ತನ ಮುಂದೆ ತಡೆಯಲ್ಪಟ್ಟಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.
8ಆಗ ದಾವೀದ ನು ಅಹೀಮೆಲೆಕನಿಗೆ--ನಿನ್ನ ಕೈಯಲ್ಲಿ ಈಟಿಯಾದರೂ ಕತ್ತಿಯಾದರೂ ಇಲ್ಲವೋ? ಯಾಕಂದರೆ ಅರಸನ ಕಾರ್ಯವು ಅವಸರವಾದದ್ದರಿಂದ ನಾನು ನನ್ನ ಕತ್ತಿ ಯನ್ನಾದರೂ ಆಯುಧಗಳನ್ನಾದರೂ ತಕ್ಕೊಂಡು ಬರಲಿಲ್ಲ ಅಂದನು.
9ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.
10ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್‌ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.
11ಆಕೀಷನ ಸೇವಕರು ಅವನಿಗೆ--ಇವನು ದೇಶದ ಅರಸನಾದ ದಾವೀದನಲ್ಲವೋ? ಸೌಲನು ಸಾವಿರಗಳನ್ನೂ ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನೆಂದು ಇವನನ್ನು ಕುರಿತು ನಾಟ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದರಲ್ಲವೇ ಅಂದರು.
12ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್‌ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ
13ಅವರ ಕಣ್ಣುಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ ತನ್ನನ್ನು ಹುಚ್ಚನ ಹಾಗೆ ತೋರಮಾಡಿ ದ್ವಾರದ ಕದಗಳನ್ನು ಕೆರೆಯುತ್ತಾ ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.
14ಆಗ ಆಕೀಷನು ತನ್ನ ಸೇವಕ ರಿಗೆ--ಇಗೋ, ಈ ಮನುಷ್ಯನು ಹುಚ್ಚು ಹಿಡಿದವ ನೆಂದು ನೋಡುತ್ತೀರಲ್ಲಾ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ?ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು.
15ಹುಚ್ಚರು ನನಗೆ ಅವಶ್ಯವೆಂದು ಹುಚ್ಚು ಆಟ ಆಡಲು ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇಂಥವನು ನನ್ನ ಮನೆಯಲ್ಲಿ ಬರಬೇಕೋ ಅಂದನು.
Bible Study with Steffi App

Memorize verses with spaced repetition. Free, no ads, 15+ languages.

Download Free ↗

Choose Theme