ದಾವೀದನುಓ ಇಸ್ರಾಯೇಲ್ ದೇವರಾದ ಕರ್ತನೇ, ಸೌಲನು ಕೆಯಾಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿನ್ನ ಸೇವಕನು ಖಂಡಿತವಾಗಿ ಕೇಳಿದನು.
Cross references
ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
ಸೌಲನು ದಾವೀದನನ್ನೂ ಅವನ ಮನುಷ್ಯರನ್ನೂ ಮುತ್ತಿಕೊಳ್ಳುವ ಹಾಗೆ ತನ್ನವರನೆಲ್ಲಾ ಕೆಯಾಲಾಕ್ಕೆ ಯುದ್ಧಕ್ಕೆ ಹೋಗಲು ಕರೆದನು.
ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.
ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.