ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು.
Cross references
ಆಗ ಸಾರಯಳು ಅಬ್ರಾಮನಿಗೆ--ನನಗೆ ಆದ ಅನ್ಯಾಯವು ನಿನ್ನ ಮೇಲೆ ಇರಲಿ. ನಾನು ನನ್ನ ದಾಸಿಯನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರವಾದೆನು. ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದಳು.
ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು.
ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ.
ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು.
ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?
ನನ್ನ ವ್ಯಾಜ್ಯವನ್ನು ನಡಿಸಿ ನನ್ನನ್ನು ಬಿಡುಗಡೆ ಮಾಡು; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀವಿಸು.
ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.