ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು.
Cross references
ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ನನ್ನ ಜನರು ಮರೆತುಬಿಡದ ಹಾಗೆ ಅವರನ್ನು ಕೊಲ್ಲಬೇಡ; ನಿನ್ನ ಪರಾಕ್ರಮದಿಂದ ಅವರನ್ನು ಚದರಿಸಿ, ನಮ್ಮ ಗುರಾಣಿಯಾದ ಓ ಕರ್ತನೇ, ಅವರನ್ನು ಕೆಡವಿಹಾಕು.
ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.