ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
Cross references
ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.
ರೋಗೆಲೀಮ್ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.
ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.
ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು.
ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.