ನಾವು ಹೋಗೋಣ ಅಂದನು. ದಾವೀದನು ಸೌಲನ ತಲೆ ದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ ನೀರಿನ ತಂಬಿಗೆ ಯನ್ನೂ ತೆಗೆದುಕೊಂಡ ಮೇಲೆ ಅವರು ಹೊರಟು ಹೋದರು. ಒಬ್ಬರಾದರೂ ನೋಡಿದ್ದಿಲ್ಲ; ಅರಿತಿದ್ದಿಲ್ಲ; ಯಾರೂ ಎಚ್ಚತ್ತಿರಲಿಲ್ಲ. ಯಾಕಂದರೆ ಕರ್ತನಿಂದ ಅಗಾಧ ನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರೂ ನಿದ್ರೆ ಮಾಡುತ್ತಿದ್ದರು.
Cross references
ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.
ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು.
ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
ಹಾಗೆಯೇ ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಇಗೋ, ಸೌಲನು ಕಂದಕದೊಳಗೆ ಮಲಗಿ ನಿದ್ರೆಮಾಡು ತ್ತಿದ್ದನು; ಅವನ ಈಟಿಯು ಅವನ ತಲೆದಿಂಬಿನ ಬಳಿ ಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲೂ ಅಬ್ನೇರನೂ ಜನರೂ ಮಲಗಿದ್ದರು.
ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.