ನೀನು ಕರ್ತನ ಮಾತನ್ನು ಕೇಳದೆ ಅಮಾಲೇಕ್ಯರ ಮೇಲೆ ಇದ್ದ ಆತನ ಉಗ್ರಕೋಪವನ್ನು ತೀರಿಸದೆ ಹೋದದರಿಂದ ಕರ್ತನು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದನು.
Cross references
ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.
ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.
ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು.