Home Bibles 1 ಸಮುವೇಲ 28:6 · ಕನ್ನಡ ಬೈಬಲ್
1 ಸಮುವೇಲ 28:6 · ಕನ್ನಡ ಬೈಬಲ್

ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.

Cross references

ಆದಿಕಾಂಡ 28:12

ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.

ಆದಿಕಾಂಡ 46:2

ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.

ನಿರ್ಗಮಕಾಂಡ 28:20

ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು.

ನಿರ್ಗಮಕಾಂಡ 28:30

ನ್ಯಾಯದ ಎದೆಪದಕದಲ್ಲಿ ಊರೀಮ್‌ ತುವ್ಮೆಾಮ್‌ ಗಳನ್ನು ಇಡಬೇಕು. ಆರೋನನು ಕರ್ತನ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಕರ್ತನ ಮುಂದೆ ಯಾವಾಗಲೂ ಇಸ್ರಾಯೇಲ್‌ ಮಕ್ಕಳ ನ್ಯಾಯವನ್ನು ತನ್ನ ಹೃದಯದ ಮೇಲೆ ಹೊರಬೇಕು.

ಅಂಕೆಗಳ ಪುಸ್ತಕ 12:6

ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.

ಅಂಕೆಗಳ ಪುಸ್ತಕ 27:21

ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್‌ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.

ದ್ವಿತೀಯೋಪದೇಶಕಾಂಡ 33:8

ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್‌ ನಿನ್ನ ಊರೀಮ್‌ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;

1 ಸಮುವೇಲ 14:37

ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು.

1 ದಿನವೃತ್ತಾಂತ 10:13

ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.

ಯೋಬ 33:14

ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ.

ಕೀರ್ತನೆಗಳು 74:9

ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.

ಸಾಮೇತಿಗಳು 1:1

ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.

ಸಾಮೇತಿಗಳು 27:1

ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.

ವಿಲಾಪಗಳು 2:9

ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.

ಯೆಹೆಜ್ಕೇಲ 20:1

ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.

ಮತ್ತಾಯ 1:20

ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.

ಯೋಹಾನ 9:31

ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.

ಯಾಕೋಬ 4:3

ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.

Interlinear

Choose Theme