Home Bibles 1 ಸಮುವೇಲ 29:9 · ಕನ್ನಡ ಬೈಬಲ್
1 ಸಮುವೇಲ 29:9 · ಕನ್ನಡ ಬೈಬಲ್

ಆಕೀಷನು ದಾವೀದನಿಗೆ ಪ್ರತ್ಯುತ್ತರವಾಗಿನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದೆಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.

Cross references

1 ಸಮುವೇಲ 29:4

ಆದರೆ ಫಿಲಿಷ್ಟಿಯರ ಅಧಿಪತಿಗಳು ಅವನ ಮೇಲೆ ರೌದ್ರವಾಗಿ ಅವನಿಗೆ--ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದ ಹಾಗೆ ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ ನೀನು ಅವನಿಗೆ ನೇಮಿಸಿದ ತನ್ನ ಸ್ಥಳಕ್ಕೆ ತಿರಿಗಿ ಹೋಗುವ ಹಾಗೆ ಅವನನ್ನು ಕಳುಹಿಸಿಬಿಡು. ಇವನು ಯಾತರಿಂದ ತನ್ನ ದೊರೆಗೆ ತನ್ನನ್ನು ಇಷ್ಟನಾಗ ಮಾಡಿಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?

2 ಸಮುವೇಲ 14:17

ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.

2 ಸಮುವೇಲ 14:20

ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.

2 ಸಮುವೇಲ 19:27

ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.

ಗಲಾತ್ಯದವರಿಗೆ 4:14

ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.

Interlinear

Choose Theme