Home Bibles 1 ಸಮುವೇಲ 3:9 · ಕನ್ನಡ ಬೈಬಲ್
1 ಸಮುವೇಲ 3:9 · ಕನ್ನಡ ಬೈಬಲ್

ಏಲಿಯು ಸಮುವೇಲ ನಿಗೆ--ಹೋಗಿ ಮಲಗು; ಆತನು ನಿನ್ನನ್ನು ಕರೆದಾಗ ನೀನು--ಕರ್ತನೇ, ಮಾತನಾಡು; ನಿನ್ನ ದಾಸನು ಕೇಳು ತ್ತಾನೆ ಎಂದು ಹೇಳು ಅಂದನು. ಹಾಗೆಯೇ ಸಮು ವೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು.

Cross references

ನಿರ್ಗಮಕಾಂಡ 20:19

ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.

ಯೆಹೋಶುವ 5:14

ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.

ಕೀರ್ತನೆಗಳು 85:8

ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.

ಕೀರ್ತನೆಗಳು 85:9

ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.

ಯೆಶಾಯ 6:8

ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.

ದಾನಿಯೇಲ 10:19

ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.

ಅಪೋಸ್ತಲರ ಕೃತ್ಯಗಳು 9:6

ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.

Interlinear

Choose Theme