ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.
Cross references
ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.
ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು.
ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು.