ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.
Cross references
ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು.
ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ; ನಾನು ಆರಂಭಿಸಿದ ಹಾಗೆ ಅಂತ್ಯ ವನ್ನು ಮಾಡುವೆನು.
ಅವನು ಬರು ವಾಗ ಇಗೋ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವದರಿಂದ ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿ ದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನು ಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.
ಆದರೆ ಅವಳು ಅದಕ್ಕೆ ಪ್ರತ್ಯುತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರುವಶ ವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಸತ್ತುಹೋದದರಿಂದಲೂ ಮಹಿಮೆಯು ಇಸ್ರಾಯೇ ಲನ್ನು ಬಿಟ್ಟುಹೋಯಿತು ಎಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು.ದೇವರ ಮಂಜೂಷವು ಶತ್ರುವಶವಾಗಿ ಹೋದದರಿಂದ ಮಹಿ ಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿದಳು.
ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.
ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರೂ ರೋಗಿಗಳೂ ಆಗಿದ್ದಾರೆ; ಅನೇಕರು ನಿದ್ರಿಸುತ್ತಾರೆ.
ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?