Home Bibles 1 ಸಮುವೇಲ 7:5 · ಕನ್ನಡ ಬೈಬಲ್
1 ಸಮುವೇಲ 7:5 · ಕನ್ನಡ ಬೈಬಲ್

ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ--

Cross references

ಯೆಹೋಶುವ 15:38

ದಿಲಾನ್‌, ಮಿಚ್ವೆ, ಯೊಕ್ತೇಲ್‌,

ಯೆಹೋಶುವ 18:26

ಮಿಚ್ಪೆ, ಕೆಫೀರಾ, ಮೋಚಾ,

ನ್ಯಾಯಾಧಿಪತಿಗಳು 20:1

ಆಗ ಇಸ್ರಾಯೇಲ್‌ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್‌ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.

1 ಸಮುವೇಲ 7:12

ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.

1 ಸಮುವೇಲ 7:16

ಅವನು ಪ್ರತಿವರುಷ ಹೊರಟು ಬೇತೇಲ್‌ ಗಿಲ್ಗಾಲ್‌ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಆ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.

1 ಸಮುವೇಲ 10:17

ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--

1 ಸಮುವೇಲ 12:23

ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.

2 ಅರಸುಗಳು 25:23

ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.

ನೆಹೆಮ್ಯ 9:1

ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್‌ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.

ಹೊಶೇಯ 5:1

ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.

ಯೋವೇಲ 2:16

ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ.

Interlinear

Choose Theme