Home Bibles 1 ಸಮುವೇಲ 8:20 · ಕನ್ನಡ ಬೈಬಲ್
1 ಸಮುವೇಲ 8:20 · ಕನ್ನಡ ಬೈಬಲ್

ನಮ್ಮ ಅರಸನು ನಮಗೆ ನ್ಯಾಯತೀರಿಸುವನು; ಅವನು ನಮ್ಮ ಮುಂದೆ ಹೊರಟು ನಮ್ಮ ಯುದ್ಧಗಳನ್ನು ನಡಿಸುವನು ಅಂದರು.

Cross references

ನಿರ್ಗಮಕಾಂಡ 33:16

ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.

ಲೇವ್ಯಕಾಂಡ 20:24

ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ.

ಅಂಕೆಗಳ ಪುಸ್ತಕ 23:9

ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.

ದ್ವಿತೀಯೋಪದೇಶಕಾಂಡ 7:6

ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.

1 ಸಮುವೇಲ 8:5

ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.

1 ಸಮುವೇಲ 12:12

ಆದರೆ ಅಮ್ಮೋನನ ಮಕ್ಕಳ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧ ಮಾಡಲು ಬರುವದನ್ನು ನೋಡಿದಾಗ ನಿಮ್ಮ ದೇವರಾದ ಕರ್ತನೇ ನಿಮಗೆ ಅರಸನಾಗಿದ್ದರೂ ನೀವು ನನಗೆ--ಹಾಗೆ ಬೇಡ; ಒಬ್ಬ ಅರಸನು ನಮ್ಮನ್ನು ಆಳಬೇಕು ಅಂದಿರಿ.

ಕೀರ್ತನೆಗಳು 106:35

ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.

ಯೋಹಾನ 15:19

ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.

ರೋಮಾಪುರದವರಿಗೆ 12:12

ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ.

2 ಕೊರಿಂಥದವರಿಗೆ 6:17

ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

ಫಿಲಿಪ್ಪಿಯವರಿಗೆ 3:20

ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.

1 ಪೇತ್ರ 2:9

ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.

Interlinear

Choose Theme