ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
Cross references
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?
ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.