Home Bibles 1 ತೆಸಲೋನಿಕದವರಿಗೆ 2:14 · ಕನ್ನಡ ಬೈಬಲ್
1 ತೆಸಲೋನಿಕದವರಿಗೆ 2:14 · ಕನ್ನಡ ಬೈಬಲ್

ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

Cross references

ಅಪೋಸ್ತಲರ ಕೃತ್ಯಗಳು 8:1

ಸೌಲನು ಅವನ ಕೊಲೆಗೆ ಸಮ್ಮತಿಸು ವವನಾಗಿದ್ದನು. ಆ ಕಾಲದಲ್ಲಿ ಯೆರೂಸ ಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರ ಹೊರತಾಗಿ ಎಲ್ಲರೂ ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.

ಅಪೋಸ್ತಲರ ಕೃತ್ಯಗಳು 8:3

ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.

ಅಪೋಸ್ತಲರ ಕೃತ್ಯಗಳು 9:1

ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ

ಅಪೋಸ್ತಲರ ಕೃತ್ಯಗಳು 9:13

ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;

ಅಪೋಸ್ತಲರ ಕೃತ್ಯಗಳು 9:31

ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.

ಅಪೋಸ್ತಲರ ಕೃತ್ಯಗಳು 11:19

ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.

ಅಪೋಸ್ತಲರ ಕೃತ್ಯಗಳು 12:1

ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ

ಅಪೋಸ್ತಲರ ಕೃತ್ಯಗಳು 17:1

ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು.

ಅಪೋಸ್ತಲರ ಕೃತ್ಯಗಳು 17:13

ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.

1 ಕೊರಿಂಥದವರಿಗೆ 7:17

ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.

2 ಕೊರಿಂಥದವರಿಗೆ 8:1

ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.

ಗಲಾತ್ಯದವರಿಗೆ 1:22

ಆಗ ಕ್ರಿಸ್ತನಲ್ಲಿರುವ ಯೂದಾಯ ಸಭೆಗಳಿಗೆ ನನ್ನ ಗುರುತಿರಲಿಲ್ಲ.

1 ತೆಸಲೋನಿಕದವರಿಗೆ 1:1

ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊ ನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

1 ತೆಸಲೋನಿಕದವರಿಗೆ 1:6

ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.

1 ತೆಸಲೋನಿಕದವರಿಗೆ 3:4

ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.

2 ತೆಸಲೋನಿಕದವರಿಗೆ 1:1

ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆ ಯರು ಬರೆಯುವದೇನಂದರೆ--

2 ತೆಸಲೋನಿಕದವರಿಗೆ 1:4

ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಚ್ಚಳಪಡುತ್ತೇವೆ.

ಹೆಬ್ರಿಯರಿಗೆ 5:7

ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.

ಹೆಬ್ರಿಯರಿಗೆ 10:33

ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.

Interlinear

Choose Theme