ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.
Cross references
ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.
ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.