ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
Cross references
ಆಗ ಯೆಹೋಶುವನೂ ಅವನ ಸಂಗಡ ಇದ್ದ ಯುದ್ಧಸ್ಥ ರೆಲ್ಲರೂ ಬಂದು ಫಕ್ಕನೆ ಮೇರೋಮು ನೀರುಗಳ ಬಳಿಯಲ್ಲಿ ಅವರ ಮೇಲೆ ಬಿದ್ದರು.
ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.