Home Bibles 1 ತೆಸಲೋನಿಕದವರಿಗೆ 5:22 · ಕನ್ನಡ ಬೈಬಲ್
1 ತೆಸಲೋನಿಕದವರಿಗೆ 5:22 · ಕನ್ನಡ ಬೈಬಲ್

ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.

Cross references

ನಿರ್ಗಮಕಾಂಡ 23:7

ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.

ರೂತ 3:4

ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳುಕೊಂಡಿದ್ದು ಹೋಗಿ ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು ಅಂದಳು.

ರೂತ 3:14

ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು. ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು.

ಯೆಶಾಯ 33:15

ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.

ಮತ್ತಾಯ 17:26

ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ.ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ

ರೋಮಾಪುರದವರಿಗೆ 12:17

ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.

1 ಕೊರಿಂಥದವರಿಗೆ 8:13

ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.

1 ಕೊರಿಂಥದವರಿಗೆ 10:31

ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.

2 ಕೊರಿಂಥದವರಿಗೆ 6:3

ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;

2 ಕೊರಿಂಥದವರಿಗೆ 8:20

ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು.

ಫಿಲಿಪ್ಪಿಯವರಿಗೆ 4:8

ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ

1 ತೆಸಲೋನಿಕದವರಿಗೆ 4:12

ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.

ಯೂದ 1:23

ಬೇರೆಯವರನ್ನು ಬೆಂಕಿಯಿಂದ ಎಳಕೊಂಡು ಭಯದಿಂದ ರಕ್ಷಿಸಿರಿ. ಶರೀರದಿಂದ ಮೈಲಿಗೆಯಾದ ಅಂಗಿಯನ್ನು ಹಗೆಮಾಡಿರಿ.

Interlinear

Choose Theme