ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ.
Cross references
ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ
ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
ನೀವು ಭಾವಿಸಿದಂತೆ ಇವರು ಕುಡಿದು ಅಮಲೇರಿ ದವರಲ್ಲ; ಯಾಕಂದರೆ ಈಗ ಹಗಲು ಮೂರು (ಒಂಭತ್ತು) ಗಂಟೆಯಾಗಿದೆಯಷ್ಟೆ.
ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.