Home Bibles 1 ತಿಮೋಥೆಯ 1:4 · ಕನ್ನಡ ಬೈಬಲ್
1 ತಿಮೋಥೆಯ 1:4 · ಕನ್ನಡ ಬೈಬಲ್

ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ

Cross references

2 ಕೊರಿಂಥದವರಿಗೆ 1:12

ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.

2 ಕೊರಿಂಥದವರಿಗೆ 7:9

ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.

ಎಫೆಸದವರಿಗೆ 4:12

ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.

1 ತಿಮೋಥೆಯ 3:16

ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ

1 ತಿಮೋಥೆಯ 4:7

ಆದರೆ ಅಜ್ಜೀಕಥೆಗಳಂತಿರುವ ಅಶುದ್ಧವಾದ ಆ ಕಥೆಗಳನ್ನು ನಿರಾಕರಿಸಿ ನೀನು ದೇವ ಭಕ್ತಿಯ ವಿಷಯದಲ್ಲಿಯೇ ಸಾಧನೆ ಮಾಡಿಕೋ.

1 ತಿಮೋಥೆಯ 6:3

ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ

1 ತಿಮೋಥೆಯ 6:11

ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.

1 ತಿಮೋಥೆಯ 6:20

ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

2 ತಿಮೋಥೆಯ 2:14

ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.

2 ತಿಮೋಥೆಯ 2:16

ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.

2 ತಿಮೋಥೆಯ 2:22

ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.

2 ತಿಮೋಥೆಯ 4:4

ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.

ತೀತ 1:1

ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ

ತೀತ 1:14

ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ಆಜ್ಞೆ ಗಳಿಗೂ ಲಕ್ಷ್ಯಕೊಡಬಾರದು.

ತೀತ 3:9

ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.

ಹೆಬ್ರಿಯರಿಗೆ 13:9

ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.

2 ಪೇತ್ರ 1:16

ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.

Interlinear

Choose Theme