Home Bibles 1 ತಿಮೋಥೆಯ 1:6 · ಕನ್ನಡ ಬೈಬಲ್
1 ತಿಮೋಥೆಯ 1:6 · ಕನ್ನಡ ಬೈಬಲ್

ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;

Cross references

1 ತಿಮೋಥೆಯ 5:15

ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ.

1 ತಿಮೋಥೆಯ 6:4

ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.

1 ತಿಮೋಥೆಯ 6:20

ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

2 ತಿಮೋಥೆಯ 2:18

ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.

2 ತಿಮೋಥೆಯ 2:23

ಮೂಢರ ಬುದ್ಧಿಯಿಲ್ಲದ ವಿಚಾರಗಳು ಜಗಳಗಳಿಗೆ ಕಾರಣವಾಗಿವೆ ಎಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.

2 ತಿಮೋಥೆಯ 4:10

ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;

ತೀತ 1:10

ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;

ತೀತ 3:9

ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.

Interlinear

Choose Theme