Home Bibles ☰ Books 1 ತಿಮೋಥೆಯ 5:20 · ಕನ್ನಡ ಬೈಬಲ್
1 ತಿಮೋಥೆಯ 5:20 · ಕನ್ನಡ ಬೈಬಲ್

ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.

Cross references

ಲೇವ್ಯಕಾಂಡ 19:17

ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.

ದ್ವಿತೀಯೋಪದೇಶಕಾಂಡ 13:11

ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.

ದ್ವಿತೀಯೋಪದೇಶಕಾಂಡ 17:13

ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.

ದ್ವಿತೀಯೋಪದೇಶಕಾಂಡ 19:20

ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.

ದ್ವಿತೀಯೋಪದೇಶಕಾಂಡ 21:21

ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.

ಅಪೋಸ್ತಲರ ಕೃತ್ಯಗಳು 5:5

ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.

ಅಪೋಸ್ತಲರ ಕೃತ್ಯಗಳು 5:11

ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.

ಅಪೋಸ್ತಲರ ಕೃತ್ಯಗಳು 19:17

ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.

ಗಲಾತ್ಯದವರಿಗೆ 2:11

ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.

1 ತಿಮೋಥೆಯ 1:20

ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

2 ತಿಮೋಥೆಯ 4:2

ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.

ತೀತ 1:13

ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.

Interlinear

Choose Theme