Home Bibles 1 ತಿಮೋಥೆಯ 5:22 · ಕನ್ನಡ ಬೈಬಲ್
1 ತಿಮೋಥೆಯ 5:22 · ಕನ್ನಡ ಬೈಬಲ್

ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ

Cross references

ಯೆಹೋಶುವ 9:14

ಆಗ ಇವರು ಕರ್ತನಿಂದ ಆಲೋಚನೆ ಯನ್ನು ಕೇಳದೆ ಅವರ ಆಹಾರದಲ್ಲಿ ತೆಗೆದುಕೊಂಡರು.

ಅಪೋಸ್ತಲರ ಕೃತ್ಯಗಳು 6:6

ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.

ಅಪೋಸ್ತಲರ ಕೃತ್ಯಗಳು 13:3

ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.

ಅಪೋಸ್ತಲರ ಕೃತ್ಯಗಳು 18:6

ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ

ಅಪೋಸ್ತಲರ ಕೃತ್ಯಗಳು 20:26

ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.

ಎಫೆಸದವರಿಗೆ 5:11

ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.

1 ತಿಮೋಥೆಯ 3:6

ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.

1 ತಿಮೋಥೆಯ 3:10

ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.

1 ತಿಮೋಥೆಯ 4:12

ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.

1 ತಿಮೋಥೆಯ 4:14

ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.

2 ತಿಮೋಥೆಯ 1:6

ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.

2 ತಿಮೋಥೆಯ 2:2

ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.

ತೀತ 1:5

ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.

ಹೆಬ್ರಿಯರಿಗೆ 6:2

ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.

2 ಯೋಹಾನ 1:11

ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.

ಪ್ರಕಟನೆ 18:4

ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.

Interlinear

Choose Theme