ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
Cross references
ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;
ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
ಇದಲ್ಲದೆ ಯಾಕೋಬನು ಐಗುಪ್ತದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಾಲ್ವತ್ತೇಳು ವರುಷಗಳು.
ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
ಮೋವಾಬ್ಯಳಾದ ರೂತಳು ನೊವೊಮಿಗೆ ನಾನು ಹೊಲಕ್ಕೆ ಹೋಗಿ ಯಾವನ ಕೃಪೆಯು ನನಗೆ ಆಗುವದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿಕೊಳ್ಳುವೆನು ಅಂದಳು. ಅದಕ್ಕೆ ಇವಳು ನನ್ನ ಮಗಳೇ, ಹೋಗು ಅಂದಳು.
ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಹೋದಳು. ಅವಳು ಹಕ್ತಲಾದುಕೊಂಡದ್ದನ್ನು ಅವಳ ಅತ್ತೆಯು ನೋಡಿದಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.
ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆದೇವರು ನನಗೆ ಏನು ಮಾಡುವನೋ ಎಂದು ನಾನು ತಿಳಿಯುವವರೆಗೂ ನನ್ನ ತಂದೆ ತಾಯಿಗಳು ಹೊರಟು ಬಂದು ನಿನ್ನ ಬಳಿಯಲ್ಲಿ ವಾಸಿಸಲಿ ಎಂದು ಹೇಳಿ ಅವರನ್ನು ಮೋವಾಬಿನ ಅರಸನ ಬಳಿಗೆ ಕರತಂದು ಬಿಟ್ಟನು.
ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ.
ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;
ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.
ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆ ತಾಯಿಗಳಿಗೆ ವಿಧೇಯರಾಗಿರ್ರಿ; ಇದು ನ್ಯಾಯವಾದದ್ದು.
ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.