Home Bibles 1 ತಿಮೋಥೆಯ 6:21 · ಕನ್ನಡ ಬೈಬಲ್
1 ತಿಮೋಥೆಯ 6:21 · ಕನ್ನಡ ಬೈಬಲ್

ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

Cross references

ಮತ್ತಾಯ 6:13

ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌.

ರೋಮಾಪುರದವರಿಗೆ 1:7

ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.

ರೋಮಾಪುರದವರಿಗೆ 16:20

ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

ರೋಮಾಪುರದವರಿಗೆ 16:23

ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

ಕೊಲೊಸ್ಸೆಯವರಿಗೆ 4:18

ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

1 ತಿಮೋಥೆಯ 1:6

ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;

1 ತಿಮೋಥೆಯ 1:19

ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

1 ತಿಮೋಥೆಯ 6:10

ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.

2 ತಿಮೋಥೆಯ 2:18

ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.

2 ತಿಮೋಥೆಯ 4:22

ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

ತೀತ 3:15

ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.

ಹೆಬ್ರಿಯರಿಗೆ 10:1

ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.

ಹೆಬ್ರಿಯರಿಗೆ 13:25

ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.

Interlinear

Choose Theme