ಅರಸನು ಯೆರೂ ಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನಲ್ಲಿರುವ ಆಲದ ಮರ ಗಳ ಹಾಗೆಯೂ ಮಾಡಿದನು.
Cross references
ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು.
ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.
ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ.
ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವದು.
ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು.
ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.