ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು.
Cross references
ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.
ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
ಅದಕ್ಕೆ ಆತನು ಅವರಿಗೆ--ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ ಎಂದು ಕೇಳಲು
ಯೇಸು ಅವನಿಗೆ--ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ ಎಂದು ಕೇಳಲು ಆ ಕುರುಡನು ಆತನಿಗೆ--ಕರ್ತನೇ, ನಾನು ನನ್ನ ದೃಷ್ಟಿಯನ್ನು ಹೊಂದುವಂತೆ ಮಾಡಬೇಕು ಅಂದನು.ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.