Home Bibles 2 ದಿನವೃತ್ತಾಂತ 10:11 · ಕನ್ನಡ ಬೈಬಲ್
2 ದಿನವೃತ್ತಾಂತ 10:11 · ಕನ್ನಡ ಬೈಬಲ್

ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.

Cross references

ನಿರ್ಗಮಕಾಂಡ 1:13

ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.

ನಿರ್ಗಮಕಾಂಡ 5:5

ಫರೋ ಹನು--ಇಗೋ, ಈಗ ದೇಶದ ಜನರು ಹೆಚ್ಚಿದ್ದಾರೆ; ನೀವು ಅವರನ್ನು ಅವರ ಬಿಟ್ಟೀಕೆಲಸಗಳಿಂದ ನಿಲ್ಲಿಸಿ ಬಿಡುತ್ತೀರಿ ಅಂದನು.

ನಿರ್ಗಮಕಾಂಡ 5:18

ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.

1 ಸಮುವೇಲ 8:18

ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.

ಯೆಶಾಯ 47:6

ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.

ಯೆಶಾಯ 58:6

ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?

ಯೆರೆಮಿಯ 28:13

ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.

ಮತ್ತಾಯ 11:29

ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.

ಲೂಕ 10:19

ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.

ಪ್ರಕಟನೆ 9:3

ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.

ಪ್ರಕಟನೆ 9:5

ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.

ಪ್ರಕಟನೆ 9:10

ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.

Interlinear

Choose Theme