ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ
Cross references
ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.
ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.
ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು,
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.
ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.
ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.